ದಿನಾಂಕ 3-11-2017 ರಂದು ಪ.ಪೂ.ಶಿಕ್ಷಣ ಇಲಾಖೆ ನಡೆಸಿದ ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ದಿನಾಂಕ 6-11-2017 ರಂದು ಅಭಿನಂದನಾ ಸಮಾರಂಭ ನಡೆಯಿತು. ನಿಶಾಂತ್ 400 ಮೀಟರ್ ಹರ್ಡರ್ಲ್ಸ್ನಲ್ಲಿ ಪ್ರಥಮ ಸ್ಥಾನ, ಅಮೃತ ಈಟಿ ಎಸೆತದಲ್ಲಿ ಪ್ರಥಮ ಸ್ಥಾನ, ನವ್ಯಶ್ರೀ 100 ಮೀಟರ್ ಹರ್ಡಲ್ಸ್ನಲ್ಲಿ ಪ್ರಥಮ ಸ್ಥಾನ ಮತ್ತು ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಕಾರ್ತಿಕ್ 800 ಮೀಟರ್ ಓಟದಲ್ಲಿ ದ್ವಿತೀಯ ಮತ್ತು 1500 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾನೆ ಹಾಗೂ ಅಂಚೆ ಇಲಾಖೆ ವತಿಯಿಂದ ‘ನನ್ನ ಕನಸು-ಭ್ರಷ್ಟಾಚಾರ ಮುಕ್ತ ಭಾರತ’ ಎಂಬ ವಿಷಯದಲ್ಲಿ ನಡೆದ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಭಾವನಾ ಇವರನ್ನು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷೆಯದಾದ ಶ್ರೀಮತಿ ರೂಪಲೇಖ ಅವರು ಅಭಿನಂದಿಸಿದರು. ವೇದಿಕೆಯಲ್ಲಿ ಪ್ರಾಂಶುಪಾಲರಾದ ಅನಿಲ್ ಕುಮಾರ್ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ವಿದ್ಯಾರ್ಥಿ ನಾಯಕ್ ತೀರ್ಥರಾಜ್ ನಿರೂಪಿಸಿ ವಂದಿಸಿದರು.