ಪ್ರವೇಶೋತ್ಸವ ಕಾರ್ಯಕ್ರಮದ ಸಲುವಾಗಿ ಬೆಳಗ್ಗೆ ಗಣಪತಿ ಹೋಮ ಮತ್ತು ಸರಸ್ವತಿ ಪೂಜೆಯು ಶ್ರೀ ಕಶೆಕೋಡಿ ಸೂರ್ಯನಾರಾಯಣ ಭಟ್ ರವರ ನೇತೃತ್ವದಲ್ಲಿ ಜರುಗಿತು. ಬಳಿಕ ನಡೆದ ಸಭಾ ಕಾರ್ಯಕ್ರಮ ಸರಸ್ವತಿ ವಂದನೆಯೊಂದಿಗೆ ಆರಂಭಗೊಂಡಿತು. ಬಳಿಕ ನೂತನ ವಿದ್ಯಾರ್ಥಿಗಳನ್ನು ದ್ವಿತೀಯ ವರ್ಷದ ವಿದ್ಯಾರ್ಥಿಗಳು ತಿಲಕ ಧಾರಣೆ ಮಾಡುವುದರ ಮೂಲಕ ಸಂಸ್ಥೆಗೆ ಆತ್ಮೀಯವಾಗಿ ಬರಮಾಡಿಕೊಂಡರು. ನಂತರದಲ್ಲಿ ವಿದ್ಯಾರ್ಥಿಗಳು ಭಾರತಮಾತೆಗೆ ಪುಷ್ಪಾರ್ಚನೆ ಮಾಡಿ ನಮಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ದ ಕಾರ್ಯದರ್ಶಿ ಡಾ.ಕೃಷ್ಣ ಭಟ್ ನೂತನ ವಿದ್ಯಾರ್ಥಿಗಳಿಗೆ ಭಗವದ್ಗೀತೆಯನ್ನು ನೀಡಿ ಆಶೀರ್ವದಿಸಿ ಶ್ರದ್ದಾ ಪೂರ್ವಕವಾಗಿ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶುಭ ಹಾರೈಸಿದರು.
ವೈದಿಕ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟ ಶ್ರೀ ಕಶೆಕೋಡಿ ಸೂರ್ಯನಾರಾಯಣ ಭಟ್ ಮಾತನಾಡಿ ಆರಂಭದ ದಿನದಂದು ಭಗವದ್ಗೀತೆಯನ್ನು ನೀಡಿದುದರ ಉದ್ದೇಶವನ್ನು ವಿವರಿಸುತ್ತಾ ಅದನ್ನು ಓದುವುದರ ಮೂಲಕವಾಗಿ ಮನೋ ನಿಗ್ರಹದಿಂದ ಕಲಿಕಾ ಸಾಮರ್ಥ್ಯವನ್ನು ವೃದ್ಧಿಸಲು ಸಾಧ್ಯ ಎಂದು ಹೇಳಿದರು.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀಹೆಚ್ಚು ಅಂಕ ಗಳಿಸಿ ಸಂಸ್ಥೆಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಮತ್ತು ಪ್ರಥಮ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಮತ್ತು ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆಯನ್ನು ಮಾಡಿದ ವಿದ್ಯಾರ್ಥಿಯನ್ನು ಗುರುತಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೂಪಲೇಖಾ ಅವರು ಮಾತನಾಡಿ ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗ ಮಾಡಿಕೊಂಡು ಉತ್ತಮ ಹಾದಿಯಲ್ಲಿ ಸಾಗುವಂತೆ ಪ್ರೋತ್ಸಾಹದ ಮಾತುಗಳನ್ನಾಡಿದರು.
ಶಾಂತಿ ಮಂತ್ರದ ಮೂಲಕ ಕೊನೆಗೊಂಡ ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಸಂಸ್ಥೆಯ ಪರಿಚಯವನ್ನು ಪವರ್ ಪಾಯಿಂಟ್ ಪ್ರೆಸೆಂಟೇಷನ್ ಮೂಲಕ ಉಪನ್ಯಾಸಕಿ ಕು.ನಾಗಶ್ರೀ ಇವರು ಮಾಡಿದರು ಕಾರ್ಯಕ್ರಮದ ವೇದಿಕೆಯಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ಶ್ರೀ ಅರುಣ್ ಬಿ ಕೆ, ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ರವಿ ಕುಮಾರ್ ಐ. ಮತ್ತು ಪ್ರಾಂಶುಪಾಲರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ಹರಿಣಿ ಪುತ್ತೂರಾಯ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಶ್ರೀಮತಿ ರೇಣುಕಾ ವಂದನಾರ್ಪಣೆ ಗೈದರು, ಉಪನ್ಯಾಸಕಿ ಕು.ವಿನಯಾ ಪ್ರತಿಭಾ ಪುರಸ್ಕಾರ ಕಾರ್ಯಕ್ರಮನ್ನು ನೆರವೇರಿಸಿದರು.