ಪರೀಕ್ಷೆಯನ್ನು ಎದುರಿಸುವುದು ಸುಲಭ ಸಾಧ್ಯ” ಎಂಬ ವಿಷಯದ ಬಗ್ಗೆ ಮಾರ್ಗದರ್ಶನ ಕಾರ್ಯಕ್ರಮ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ “ಪರೀಕ್ಷೆಯನ್ನು ಎದುರಿಸುವುದು ಸುಲಭ ಸಾಧ್ಯ” ಎಂಬ ವಿಷಯದ ಬಗ್ಗೆ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.

ಪ್ರತಿಯೊಬ್ಬನಲ್ಲಯೂ ಸಾಮರ್ಥ್ಯ ಇದ್ದೇ ಇದೆ. ಆತ್ಮ ವಿಶ್ವಾಸ, ಸಾಧಿಸುವ ಛಲ ಮತ್ತು ಧನಾತ್ಮಕವಾಗಿ ಆಲೋಚಿಸುವ ಶಕ್ತಿ ಬೆಳೆಸಿಕೊಂಡಾಗ ಯಾವುದೂ ಕಷ್ಟವಾಗುವುದಿಲ್ಲ ಎಂದು ಜೀವನ ಕೌಶಲ್ಯ ತರಬೇತುದಾರರಾದ ಶ್ರೀಮತಿ ಮೀನಾ ಕುಮಾರಿ ಹೇಳಿದರು. ಅವರು ನರೇಂದ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ, ಒತ್ತಡ ನಿವಾರಣೆ ಹೇಗೆ ಮತ್ತು ಪರೀಕ್ಷೆಯನ್ನು ಎದುರಿಸಲು ಮಾನಸಿಕ ಸಿದ್ಧತೆ ಯಾವ ರೀತಿಯಲ್ಲಿ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಮಾರ್ಗದರ್ಶನ ನೀಡುತ್ತಾ ಮಾತನಾಡುತ್ತಿದ್ದರು. ನಂತರದಲ್ಲಿ ವಿದ್ಯಾರ್ಥಿಗಳೊಂದಿಗೆ ವಿಶೇಷ ಸಂವಾದವನ್ನು ನಡೆಸಿ ಅವರ ಸಂದೇಹಗಳಿಗೆ ಪರಿಹಾರದ ಮಾರ್ಗವನ್ನು ಸೂಚಿಸಿದರು.