ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟಗೊಳಿಸುವ ಹಬ್ಬ ಈ ರಕ್ಷಾಬಂಧನ. ಇತ್ತೀಚೆಗೆ ಯುವಜನತೆಗೆ ಪಾಶ್ಚಾತ್ಯ ಆಚರಣೆಗಳ ಮೇಲೆ ಮೋಹ ಹೆಚ್ಚಾಗಿದೆ. ಅವರಿಗೆ ಸಂಬಂಧಗಳ ಮೌಲ್ಯ ಸಾರುವ ರಕ್ಷಾಬಂಧನದಂತಹ ಹಬ್ಬಗಳ ಮಹತ್ವ ತಿಳಿಸಿಕೊಡುವ ಕೆಲಸ ಆಗಬೇಕಿದೆ. ಬೆಲೆ ಕಟ್ಟಲಾಗದ ಸಂಬಂಧವೆಂದರೆ ಅದು ಅಣ್ಣ-ತಂಗಿಯ ಸಂಬಂಧ. ಅವರ ನಡುವಿನ ಪ್ರೀತಿ ಹಾಗೂ ನೆನಪುಗಳು ಅಚ್ಚಳಿಯದೆ ಉಳಿಯಲು ಪ್ರತೀ ವರ್ಷ ರಕ್ಷಾಬಂಧನವನ್ನು ಆಚರಿಸಲಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಹೇಳಿದರು.
ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ರಕ್ಷಾಬಂಧನ ಆಚರಣೆಯ ಮಹತ್ವವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೂಪಲೇಖರವರು ಉಪಸ್ಥಿತರಿದ್ದರು. ಬಳಿಕ ಉಪನ್ಯಾಸಕರು, ಸಿಬ್ಬಂದಿವರ್ಗದವರು ಮತ್ತು ವಿದ್ಯಾರ್ಥಿಗಳು ಶ್ಲೋಕ ಪಠಿಸಿ ಪರಸ್ಪರ ರಕ್ಷಾಧಾರಣೆಯನ್ನು ಮಾಡಿದರು. ಉಪನ್ಯಾಸಕರಾದ ಸೂರ್ಯನಾರಾಯಣ ಕಾರ್ಯಕ್ರಮದಲ್ಲಿ ಸ್ವಾಗತಿಸಿ, ವಂದಿಸಿದರು.