ನರೇಂದ್ರ ಪದವಿ ಪೂರ್ವ ಕಾಲೇಜು, ತೆಂಕಿಲ, ಪುತ್ತೂರು ಇದರ ವಾರ್ಷಿಕ ಕ್ರೀಡಾಕೂಟವು ದಿನಾಂಕ 15-11-2019 ಶುಕ್ರವಾರದಂದು ವಿವೇಕಾನಂದ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪುತ್ತೂರಿನ ಖ್ಯಾತ ಉದ್ಯಮಿಗಳಾದ ಶ್ರೀ ಕೆ. ಸದಾನಂದರವರು ಉದ್ಘಾಟನೆಯನ್ನು ನೆರವೇರಿಸಿ, ಸೋಲು – ಗೆಲುವು ಎಂಬುದು ಜೀವನದ ಅವಿಭಾಜ್ಯ ಅಂಗಗಳು ಅದನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂಬುದಾಗಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಯಿನಿ ಶ್ರೀಮತಿ ಆಶಾ ಬೆಳ್ಳಾರೆಯವರು ಮಾತನಾಡಿ, ಕ್ರೀಡೆ ಪಠ್ಯಕ್ಕೆ ಪೂರಕ, ಎಂದೂ ಬಾಧಕವಲ್ಲ ಎಂದು ತಿಳಿಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೂಪಲೇಖರವರು ವಿದ್ಯಾರ್ಥಿಗಳಿಗೆ ಕ್ರೀಡಾಸ್ಫೂರ್ತಿಯನ್ನು ತುಂಬಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ತಿರುಮಲೇಶ್ವರ ಭಟ್ ಮತ್ತು ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪ್ರಸಾದ್ ಶಾನಭಾಗ್ ರವರು ಸ್ವಾಗತಿಸಿ, ಸಂಚಾಲಕರಾದ ಶ್ರೀಕಾಂತ ಕೊಳತ್ತಾಯ ಧನ್ಯವಾದಗಳನ್ನು ಸಮರ್ಪಿಸಿದರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ಶ್ರೀ ದಾಮೋದರ್, ಶ್ರೀಮತಿ ಹರಿಣಾಕ್ಷಿ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಗಿರೀಶ್ ರವರು ಕ್ರೀಡಾಕೂಟವನ್ನು ಯಶಸ್ವಿಯಾಗಿ ನೆರವೇರಿಸಲು ಸಹಕರಿಸಿದರು.