ನೆಲ್ಯಾಡಿಯ ಬೆಥನಿ ಪದವಿ ಕಾಲೇಜಿನಲ್ಲಿ ದಿನಾಂಕ 5-12-2019 ರಂದು ಆಯೋಜಿಸಿದ್ದ ಕಲಾಪರ್ವ – 2019೯ ರ ವಿವಿಧ ಬಗೆಯ ಸ್ಪರ್ಧೆಗಳಲ್ಲಿ , ನರೇಂದ್ರ ಪ.ಪೂ.ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಸಿದ್ದಾರ್ಥ ಇವರು ಫೋಟೋಗ್ರಫಿಯಲ್ಲಿ ಮತ್ತು ಪ್ರಥಮ ವಾಣಿಜ್ಯ ವಿಭಾಗದ ಸುಶೀರ ಹೊಸಮನೆ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ಶ್ರೀಚರಣ ಇವರ ತಂಡ ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನಗಳನ್ನು ಪಡೆದಿರುತ್ತಾರೆ. ಅಡುಗೆ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಮೇಘಶ್ರೀ ಮತ್ತು ಲವಿಕ ಭಾಗವಹಿಸಿರುತ್ತಾರೆ.
ಇವರಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು, ಈ ವಿದ್ಯಾರ್ಥಿಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.





