ವಿದ್ಯಾರ್ಥಿಗಳ ಪ್ರತಿಭಾ-ಪುರಸ್ಕಾರ ಸಮಾರಂಭ

ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿನ ಪ್ರತಿಭೆಯನ್ನು ಗುರುತುಸಿ ಉತ್ತಮ ವಾತಾವರಣ ಕಲ್ಪಿಸಿಕೊಟ್ಟಾಗ ಪ್ರತಿಭೆ ವಿಕಸನಗೊಳ್ಳುತ್ತದೆ. ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಸಂಸ್ಕಾರ, ಶಿಸ್ತನ್ನು ರೂಢಿಸಿಕೊಂಡು ವಿವೇಕಶಾಲಿಯಾಗಿ, ಸದ್ಗುಣಗಳನ್ನು ಮೈಗೂಡಿಸಿಕೊಂಡು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದರು. ಎಂದು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೂಪಲೇಖ ಇವರು ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 202-21 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡು ಕಾಲೇಜಿಗೆ ಕೀರ್ತಿ ತಂದ ಎಲ್ಲಾ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಅವರು ಶುಭ ಹಾರೈಸಿದರು.

ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ರಾಜಗೋಪಾಲ ಪ್ರಭು ರವರು ಮಾತನಾಡುತ್ತಾ ಭವಿಷ್ಯದ ಬಗ್ಗೆ ಸ್ಪಷ್ಟ ಗುರಿ ಇಟ್ಟುಕೊಂಡು ಮುನ್ನುಗ್ಗಬೇಕು ಹಾಗೂ ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು. ದಿಟ್ಟ ಹೆಜ್ಜೆಯೇ ಮುಂದಿನ ಸಾಧನೆಗೆ ಅಣಿಯಾಗಬೇಕು ಎಂದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ರೂಪಶ್ರೀ ಮತ್ತು ಎಸ್.ಕಾರ್ತಿಕ್ ನಾಯಕ್ ಮತ್ತು ವಾಣಿಜ್ಯ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಕಾವ್ಯಶ್ರೀ ಇವರನ್ನು ಪುರಸ್ಕರಿಸಿ ನಗದು ಬಹುಮಾನವನ್ನು ನೀಡಲಾಯಿತು. ಅಭಿನಂದನೆಗೆ ಪಾತ್ರರಾದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸುತ್ತಾ, ಪೋಷಕರು, ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಬೆಂಬಲದಿಂದ ಮತ್ತು ಸತತ ಪರಿಶ್ರಮದಿಂದ ಈ ಸಾಧನೆ ಸಾಧ್ಯವಾಯಿತು ಎಂದು ಹೇಳಿದರು.

ಈ ಸಮಾರಂಭದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ರವರು, ಸ್ವಾಗತಿಸಿ ಮಾತನಾಡುತ್ತಾ ದೃಢ ನಿರ್ಧಾರದ ಜೊತೆಗೆ ಕಠಿಣ ಪರಿಶ್ರಮ ಜೊತೆಯಾದಾಗ ಮಾತ್ರ ಸಾಧನೆಯ ಮೆಟ್ಟಿಲೇರಲು ಸಾಧ್ಯ.ನಿಮ್ಮ ಈ ಸಾಧನೆ ಮುಂದಿನ ಪೀಳಿಗೆಯ ಪ್ರತಿಭೆಗಳ ಹಾದಿಯನ್ನು ಸುಗಮಗೊಳಿಸಲು ಪ್ರೇರಣೆಯಾಗಲಿ. ಎಂದರು. ಕಾಲೇಜಿನ ಅತ್ಯುತ್ತಮ ಫಲಿತಾಂಶಕ್ಕೆ ಕಾರಣರಾದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀಕಾಂತ್ ಕೊಳತ್ತಾಯ, ಸದಸ್ಯರಾದ ತಿರುಮಲೇಶ್ವರ ಭಟ್, ಚಂದ್ರಶೇಖರ ನಾಯ್ಕ್ ಕಬಕ, ರಕ್ಷಕ-ಶಿಕ್ಷಕ ಸಂಘದ ಸದಸ್ಯರಾದ ಸುರೇಶ್ ನಾಯಕ್ ಉಪಸ್ಥಿತರಿದ್ದರು. ಉಪನ್ಯಾಸಕರಾದ ಶ್ರೀಮತಿ ಮಧುರಾ, ವಂದಿಸಿದರು ಮತ್ತು ಕಾರ್‍ಯಕ್ರಮವನ್ನು ನಿರೂಪಿಸಿದರು.