ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ದೀಪಪ್ರದಾನ ಸಮಾರಂಭ

ಇಂದಿನ ಯುವ ಜನಾಂಗಕ್ಕೆ ಜೀವನ ಮೌಲ್ಯಗಳನ್ನು ಅರಿತುಕೊಳ್ಳುವ ಗುಣಾತ್ಮಕ ಶಿಕ್ಷಣದ ಅಗತ್ಯವಿದೆ. ವಿದ್ಯಾರ್ಥಿಗಳು ಉತ್ತಮ ಗುಣ ನಡೆತೆಗಳನ್ನು ಮೈಗೂಡಿಸಿಕೊಂಡು ಏಕಾಗ್ರತೆಯಿಂದ ಗುರಿ ಸಾಧನೆ ಮಾಡಬೇಕು. ಉತ್ತಮ ಸಮಾಜ ನಿರ್ಮಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾದುದು. ಎಂದು ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀಕಾಂತ್ ಕೊಳತ್ತಾಯ ಇವರು ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2020-21 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ದೀಪಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಅಭಿನಂದನಾ ಕಾರ್‍ಯಕ್ರಮ ನಡೆಯಿತು.ಉಪನ್ಯಾಸಕರಾದ ಶ್ರೀಮತಿ ಮಧುರಾ ಮತ್ತು ರೇಖಾ ಈ ಕಾರ್‍ಯಕ್ರಮವನ್ನು ನೆರವೇರಿಸಿದರು.

ಹಿಂದಿ ಉಪನ್ಯಾಸಕರಾದ ಶ್ರೀಮತಿ ಪ್ರಫುಲ್ಲಾ ಮತ್ತು ಸಂಸ್ಕೃತ ಉಪನ್ಯಾಸಕರಾದ ವಿಘ್ನೇಶ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡು ಕಾಲೇಜಿಗೆ ಕೀರ್ತಿ ತಂದ ಎಲ್ಲಾ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಅವರು ಶುಭ ಹಾರೈಸಿದರು.

ಅಭಿನಂದನೆಗೆ ಪಾತ್ರರಾದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸುತ್ತಾ, ಪೋಷಕರು, ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಬೆಂಬಲದಿಂದ ಮತ್ತು ಸತತ ಪರಿಶ್ರಮದಿಂದ ಈ ಸಾಧನೆ ಸಾಧ್ಯವಾಯಿತು ಎಂದು ಹೇಳಿದರು.

ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ದೀಪಪ್ರದಾನ ಮಾಡಿ ಶುಭಹಾರೈಸಿದರು.

ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ರಾಜಗೋಪಾಲ ಪ್ರಭು ರವರು ಮಾತನಾಡಿ ಸಾಧನೆಯ ಹಾದಿ ಸುಗಮವಲ್ಲ. ಛಲವಿದ್ದವರು ಮಾತ್ರ ಆ ಹಾದಿಯಲ್ಲಿ ಸಾಗಲು ಸಾಧ್ಯ. ಮರಳಿ ಯತ್ನವ ಮಾಡು ಎಂಬ ಮಾತಿನಂತೆ ನಿರಂತರ ಪ್ರಯತ್ನದಿಂದ ಮಾತ್ರ ಯಶಸ್ಸು ಸಿಗಬಲ್ಲದು. ಎಂದು ಹೇಳಿದರು.

ಈ ಸಮಾರಂಭದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ರವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗಣಿತಶಾಸ್ತ್ರ ಉಪನ್ಯಾಸಕಿಯಾದ ಶ್ರೀಮತಿ ರೇಣುಕಾ ವಂದಿಸಿದರು. ಇಂಗ್ಲಿಷ್‌ ಉಪನ್ಯಾಸಕರಾದ ಶ್ರೀಮತಿ ಶೈಲಾ ಕಾರ್‍ಯಕ್ರಮವನ್ನು ನಿರೂಪಿಸಿದರು.