ಕನ್ನಡ ರಾಜ್ಯೋತ್ಸವ ಆಚರಣೆ

ಕನ್ನಡದ ಇತಿಹಾಸ, ಮಹತ್ವ, ಹೋರಾಟಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಹಾಗೂ ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಮಹನೀಯರನ್ನು ಸ್ಮರಿಸುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವ ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ. ಈ ನಾಡಿನ ಸೇವೆಯನ್ನು ಮುಂದುವರೆಸಲು ಇದು ಇನ್ನಷ್ಟು ಪ್ರೇರಣೆ ನೀಡಿದಂತಾಗುತ್ತದೆ ಎಂದು ನರೇಂದ್ರ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಹೇಳಿದರು.

ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳೆಲ್ಲರೂ ಗುಂಪಿನಲ್ಲಿ ನಾಡಗೀತೆಯನ್ನು ಹಾಡುವ ಮೂಲಕ ಕಾರ್‍ಯಕ್ರಮ ಮತ್ತಷ್ಟು ರಂಗೇರಿತು.

ವೇದಿಕೆಯಲ್ಲಿ ಗಣಿತಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ರೇಣುಕಾ ಉಪಸ್ಥಿತರಿದ್ದರು. ಕಾರ್‍ಯಕ್ರಮವನ್ನು ಜೀವಶಾಸ್ತ್ರ ಉಪನ್ಯಾಸಕರಾದ ಮಧುರಾ ನಿರೂಪಿಸಿದರು.