ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ

ಶ್ರಾವಣ ಮಾಸದಲ್ಲಿ ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸುವ ಹಬ್ಬ ಎಂದರೆ ಶ್ರೀಕೃಷ್ಣ ಜನ್ಮಾಷ್ಟಮಿ. ಆ ಪ್ರಯುಕ್ತ ನರೇಂದ್ರ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಭಜನಾ ಕಾರ್‍ಯಕ್ರಮ ನಡೆಯಿತು. ಜೊತೆಗೆ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳಾದ ಮಡಿಕೆ ಒಡೆಯುವುದು, ಹಗ್ಗ-ಜಗ್ಗಾಟ, ಸಂಗೀತ ಕುರ್ಚಿ, ಕ್ಯಾಪ್-ಬ್ರಶ್ ಇನ್ನೂ ಇತ್ಯಾದಿ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಉಪನ್ಯಾಸಕರ ನೇತೃತ್ವದಲ್ಲಿ ಈ ಎಲ್ಲಾ ಆಟಗಳು ನಡೆಯಿತು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಸಡಗರ ಸಂಭ್ರಮದಿಂದ ಭಾಗವಹಿಸಿದರು, ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದ ಮತ್ತು ಎಲ್ಲಾ ವಿದ್ಯಾರ್ಥಿಗಳು ಈ ಸಂಭ್ರಮದಲ್ಲಿ ಭಾಗಿಯಾಗಿದ್ದರು.